ಹುಬ್ಬಳ್ಳಿ: ಬೀಗ ಮುರಿದು ಮನೆಗಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಹಳೇ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಂದೀಶ ಉಮೇಶ ಸಕ್ರಪ್ಪನವರ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ 8,84,000ರೂ.ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳ ವಶಪಡಿಸಿಕೊಳ್ಳಲಾಗಿದೆ ಹಾಗೂ 06 ಮನೆಗಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.
ಆರೋಪಿತನನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿದಿ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಪೊಲೀಸ ಆಯುಕ್ತರು ಸೂಕ್ತ ಬಹುಮಾನ ಘೋಷಿಸಿದ್ದಾರೆ.
Kshetra Samachara
22/09/2020 04:42 pm