ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಅ.15ಕ್ಕೆ ಮುಂದೂಡಿದೆ.
ಯೋಗೀಶಗೌಡ ಕೊಲೆ ನಡೆದ ಸಂದರ್ಭದಲ್ಲಿ ಉಪನಗರ ಪೊಲೀಸ್ ಠಾಣೆ ಇನ್‌ಸ್ಟೆಕ್ಟರ್ ಆಗಿದ್ದ ಹಾಗೂ ಪ್ರಕರಣದ ತನಿಖಾಧಿಕಾರಿ ಆಗಿದ್ದ ಚನ್ನಕೇಶವ ಟಿಂಗರೀಕರ ಅವರು ಇಲ್ಲಿನ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಶುಕ್ರವಾರ ನ್ಯಾಯಾಲಯದ ಎದುರು ವಿಚಾರಣೆಗೆ ಬಂತು. ಈ ವೇಳೆ ಸಿಬಿಐ ಪರ ಪ್ರಾಸಿಕ್ಯೂಟರ್ ತಕರಾರು ಸಲ್ಲಿಸಲು ಸಮಯಾವಕಾಶ ಕೇಳಿದ್ದರಿಂದ ನ್ಯಾಯಾಲಯ ವಿಚಾರಣೆಯನ್ನು ಅ.15ಕ್ಕೆ ವಿಚಾರಣೆ ಮುಂದೂಡಿದೆ.
Kshetra Samachara
10/10/2020 10:19 pm