ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಮಾವನ ಕೊಲೆ ,ಶಂಕಿತ ಡೆಂಟಿಸ್ಟ್ ಅಳಿಯ ಪೊಲೀಸ್ ವಶಕ್ಕೆ

ಹುಬ್ಬಳ್ಳಿ : ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಬೆಳ್ಳಂಬೆಳಗ್ಗೆ ಕೊಲೆ ನಡೆದಿದ್ದು, ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಶಂಕ್ರಪ್ಪ ಮುಶನ್ನವರ ಕೊಲೆಯಾಗಿದ್ದಾರೆ‌. ಶಂಕ್ರಪ್ಪ ಅವರನ್ನು ಅವರ ಅಳಿಯ ಸಂತೋಷ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಸ್ಥಳಕ್ಕೆ ಹು-ಧಾ ಪೊಲೀಸ್ ಆಯುಕ್ತ ಲಾಬುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಕೊಲೆಗೈದ ಸಂತೋಷನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಶವವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

24/10/2020 02:01 pm

Cinque Terre

66.69 K

Cinque Terre

7

ಸಂಬಂಧಿತ ಸುದ್ದಿ