ಹುಬ್ಬಳ್ಳಿ: ಮಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಫ್ರಾನ್ಸ್ ಅಧ್ಯಕ್ಷರ ಸಂದೇಶಗಳನ್ನು ಒಳಗೊಂಡ ಭಿತ್ತಿಪತ್ರಗಳನ್ನು ಹಂಚುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಮುಸ್ಲಿಂ ಸಮಾಜದ ಐವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಮುಸ್ಲಿಂ ಮುಖಂಡರು ಕಸಬಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪರಸ್ಥಿತಿ ಕೈ ಮೀರುವದನ್ನು ಅರಿತ ಪೊಲೀಸರು ಕೆಲ ಹೊತ್ತಿನ ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತು.
‘ಮುಸ್ಲಿಂ ಧರ್ಮಗುರುವಿನ ಬಗ್ಗೆ ಫ್ರಾನ್ಸ್ ಅಧ್ಯಕ್ಷರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಯುವಕರು ಕರಪತ್ರ ಹಂಚುತ್ತಿದ್ದ ವಿಡಿಯೊ ವೈರಲ್ ಆಗಿತ್ತು. ಶಾಂತಿ ಕದಡದಂತೆ ಎಚ್ಚರಿಕೆ ವಹಿಸಲು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಯುವಕರನ್ನು ವಶಕ್ಕೆ ಪಡೆದಿದ್ದರು.
‘ಈದ್ ಮಿಲಾದ್ ದಿನದಂದು ರಸ್ತೆಯಲ್ಲಿ ಬಿದ್ದಿದ್ದ ಕರಪತ್ರಗಳನ್ನು ನಮ್ಮ ಸಮಾಜದ ಕೆಲ ಯುವಕರು ತುಳಿದಿದ್ದರು. ಅವುಗಳನ್ನು ಯಾರು ಹಂಚಿದ್ದಾರೆ ನಮಗೆ ಗೊತ್ತಿಲ್ಲ. ಯಾರೂ ದೂರು ನೀಡದಿದ್ದರೂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ದೂರಿದರು.ಇದಕ್ಕೆ ಮುಸ್ಲಿಂ ಸಮಾಜದಿಂದ ಆಕ್ರೋಶ ವ್ಯಕ್ತಪಡಿಸಿದರು.ಬಳಿಕ ಸಮಾಜದ ಪ್ರಮುಖರು ಕಸಬಾಠಾಣೆ ಪೊಲೀಸರ ಜೊತೆ ಮಾತುಕತೆ ನಡೆಸಿದ ಬಳಿಕ ಆ ಯುವಕರನ್ನು ಬಿಡಲಾಯಿತು. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.
Kshetra Samachara
02/11/2020 01:56 pm