ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಡಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿಚಾರಣೆ ಅತ್ಯವಾಗಿರುವ ಹಿನ್ನೆಲೆ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವುದರಿಂದ ಧಾರವಾಡದ ಜಿಲ್ಲಾ ನ್ಯಾಯಾಲಯದ ಸುತ್ತ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ.
ನ್ಯಾಯಾಲಯದ ಮುಂದೆ ಹಾಗೂ ಉಪನಗರ ಪೊಲೀಸ್ ಠಾಣೆ ಮುಂದೆ ವಿನಯ ಅಭಿಮಾನಿಗಳು ಸೇರುವ ನಿರೀಕ್ಷೆ ಇದ್ದು,ನ್ಯಾಯಾಲಯ ಹಾಗೂ ಉಪನಗರ ಪೊಲೀಸ್ ಠಾಣೆ ಸೇರಿದಂತೆ ನಗರದ ಪ್ರಮುಖ ಕಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Kshetra Samachara
09/11/2020 11:29 am