ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಉಪನಗರ ಠಾಣೆ ಇನ್ ಸ್ಪೆಕ್ಟರ್ ಚನ್ನಕೇಶವ ಟಿಂಗರಿಕರ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಧಾರವಾಡದ ಹೈಕೋರ್ಟ್ ಇದೇ ತಿಂಗಳು 30ಕ್ಕೆ ಮುಂದೂಡಿದೆ.
ಸಿಬಿಐ ಅಧಿಕಾರಿಗಳು ಕೊಲೆ ಪ್ರಕರಣದಡಿ ತಮ್ಮನ್ನು ಬಂಧಿಸಬಹುದು ಎಂಬ ಆಲೋಚನೆಯಿಂದ ಚನ್ನಕೇಶವ ಟಿಂಗರಿಕರ್ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ಇದೇ ತಿಂಗಳು 30ಕ್ಕೆ ಮುಂದೂಡಿದೆ.
Kshetra Samachara
23/11/2020 02:45 pm