ಹುಬ್ಬಳ್ಳಿ: ಕರ್ತ್ಯವ್ಯ ನಿರತ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ವಕೀಲನ ನಡುವೆ ರಾತ್ರಿ ವೇಳೆ ನಡು ರಸ್ತೆಯಲ್ಲಿಯೇ ಮಾತಿನ ಚಕಮಕಿ ನಡೆದಿರುವ ಘಟನೆ ನವನಗರದ ಪೊಲೀಸ್ ಠಾಣೆ ಬಳಿ ನಡೆದಿದೆ.
ಪೊಲೀಸ್ ಇನ್ಸ್ಪೆಕ್ಟರ್ ಪ್ರಭು ಸೂರಿನ ಮತ್ತು ವಕೀಲ ವಿನೋದ್ ಪಾಟೀಲ್ ನಡುವೆ ಮಾತಿನ ಚಕಮಕಿ ನಡೆದಿದ್ದು,ಸ್ಥಳೀಯರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಮಾಧ್ಯಮಕ್ಕೆ ನೀಡಿದ್ದಾರೆ.
ಇನ್ನೂ ರಸ್ತೆ ಮಧ್ಯದಲ್ಲಿಯೇ ಇನ್ಸ್ಪೆಕ್ಟರ್ ಹಾಗೂ ವಕೀಲರ ನಡುವಿನ ಜಗಳವನ್ನು ಬಿಡಿಸಲು ಸ್ಥಳೀಯರು ಹರಸಾಹಸ ಪಡುವಂತಾಯಿತು.ಈ ಕುರಿತು ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ.
Kshetra Samachara
27/11/2020 11:02 am