ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಡಿ.14ರವರೆಗೆ ಕಾಯ್ದಿರಿಸಿದೆ.
ಇಂದ ಬೆಳಗಾವಿ ಹಿಂಡಲಗಾ ಜೈಲಿನಿಂದ ವೀಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರಪಡಿಸಿದರು.
ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಡಿ.14ರವರೆಗೆ ಕಾಯ್ದಿರಿಸಿದೆ.
ಈಗಾಗಲೇ ಡಿ.21ರವರೆಗೆ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ವಿಸ್ತರಿಸಿದೆ.
Kshetra Samachara
09/12/2020 05:11 pm