ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಂದ್ರಶೇಖರ ಇಂಡಿ 14 ದಿನ ನ್ಯಾಯಾಂಗ ಬಂಧನಕ್ಕೆ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ಪೊಲೀಸರಿಂದ ಬಂಧಸಲ್ಪಟ್ಟಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಧಾರವಾಡದ ಮೂರನೇ ಜಿಲ್ಲಾ, ಸತ್ರ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಡಿ.28ರ ವರೆಗೆ ಚಂದ್ರಶೇಖರ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನಾಳೆ ಸಿಬಿಐ ಕಸ್ಟಡಿಗೆ ಕೊಡುವ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಹೆಚ್ಚಿನ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಎರಡು ದಿನ ಇಂಡಿ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಇದಕ್ಕೆ ಇಂಡಿ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿ, ಈಗಾಗಲೇ ಆರೋಪಿತರನ್ನು ಹಲವು ಬಾರಿ ವಿಚಾರಣೆ ಮಾಡಲಾಗಿದೆ. ಈಗ ಮತ್ತೆ ವಶಕ್ಕೆ ಕೇಳುತ್ತಿರುವುದು ಸರಿಯಲ್ಲ ಎಂದು ವಾದ ಮಂಡಿಸಿದರು.

ಇದಕ್ಕೆ ಸಿಬಿಐ ಪರ ವಕೀಲರು ಇನ್ನೂ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಇಲ್ಲಿಯವರೆಗೆ ಅವರನ್ನು ಕೇವಲ ಪ್ರಾಥಮಿಕವಾಗಿ ವಿಚಾರಣೆ ಮಾಡಲಾಗಿದೆ. ಇನ್ನೂ ಅವರಿಂದ ಅಗತ್ಯ ಮಾಹಿತಿ ಕಲೆ ಹಾಕಬೇಕಾಗಿದೆ.

ಹೀಗಾಗಿ ಅವರನ್ನು ಕಸ್ಟಡಿಗೆ ಕೊಡಬೇಕು ಎಂದು ಮನವಿ ಮಾಡಿದರು.

ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯ, ಇಂಡಿ ಪರ ವಕೀಲರಿಗೆ ನಾಳೆ ತಕರಾರು ಸಲ್ಲಿಸಲು ತಿಳಿಸಿ, ಆರೋಪಿಯನ್ನು 14 ದಿನ (ಡಿ.28) ನ್ಯಾಯಾಂಗ ಬಂಧನಕ್ಕೆ ನೀಡಿ, ಡಿ.15ಕ್ಕೆ ಆರೋಪಿಯನ್ನು ಸಿಬಿಐ ಕಸ್ಟಡಿಗೆ ಕೊಡಬೇಕೋ ಬೇಡವೋ ಎಂಬುದರ ಕುರಿತು ವಿಚಾರಣೆ ನಡೆಸುವುದಾಗಿ ಹೇಳಿ ಇಂದಿನ ವಿಚಾರಣೆಯನ್ನು ಮುಂದೂಡಿತು.

Edited By : Nirmala Aralikatti
Kshetra Samachara

Kshetra Samachara

14/12/2020 03:58 pm

Cinque Terre

99.27 K

Cinque Terre

0

ಸಂಬಂಧಿತ ಸುದ್ದಿ