ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯವಾಗಿದ್ದು, ಇಂದು ಅವರನ್ನು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಹೆಚ್ಚಿನ ವಿಚಾರಣೆಗಾಗಿ ಚಂದ್ರಶೇಖರ ಅವರನ್ನು ಸಿಬಿಐ ಎರಡು ದಿನ ತಮ್ಮ ಕಸ್ಟಡಗಿ ಪಡೆದುಕೊಂಡಿತ್ತು. ಇಂದು ಆ ಅವಧಿ ಮುಕ್ತಾಯಗೊಂಡ ಹಿನ್ನಲೆ ಧಾರವಾಡದ ಉಪನಗರ ಪೊಲೀಸ್ ಠಾಣೆಯಿಂದ ಇಂಡಿ ಅವರನ್ನು ಸಿಬಿಐ ಅಧಿಕಾರಿಗಳು ಧಾರವಾಡದ ಮೂರನೇ ಹೆಚ್ಚುವರಿ ಹಾಗೂ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆದುಕೊಂಡು ಹೋದರು.
Kshetra Samachara
17/12/2020 03:24 pm