ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಂಬಿ ಹಿಂದೆ ಕುಲಕರ್ಣಿ : ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಧಾರವಾಡ : ಸದ್ಯ ಜೈಲು ವಾಸದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ. 6ಕ್ಕೆ ಮುಂದೂಡಿದೆ.

ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನಾ ವಿಶೇಷ ಸಿಬಿಐ ನ್ಯಾಯಾಲಯ ತಿರಸ್ಕರಿಸಿದ್ದರಿಂದ ವಿನಯ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆ ಅರ್ಜಿಗೆ ತಕರಾರು ಸಲ್ಲಿಸಲು ಸಿಬಿಐಗೆ ಅವಕಾಶ ನೀಡಿ, ವಿಚಾರಣೆಯನ್ನು ಡಿ. 22ಕ್ಕೆ ಹೈಕೋರ್ಟ್ ನಿಗದಿಪಡಿಸಿತ್ತು.

ಅದರಂತೆ ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ, ಅರ್ಜಿಗೆ ಸಂಬಂಧಿಸಿದಂತೆ ವಿವರವಾದ ತಕರಾರು ಸಲ್ಲಿಸಬೇಕಿದ್ದು, ಇನ್ನಷ್ಟು ಕಾಲಾವಕಾಶ ಅಗತ್ಯವಿದೆ. ಹೀಗಾಗಿ ಸಮಯ ನೀಡುವಂತೆ ಸಿಬಿಐ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯಪೀಠ ವಿಚಾರಣೆಯನ್ನು ಬರುವ ಜ. 6ಕ್ಕೆ ಮುಂದೂಡಿದೆ.

Edited By : Nirmala Aralikatti
Kshetra Samachara

Kshetra Samachara

22/12/2020 01:44 pm

Cinque Terre

84.89 K

Cinque Terre

2

ಸಂಬಂಧಿತ ಸುದ್ದಿ