ಯೋಗೀಶಗೌಡ ಹತ್ಯೆ : ತನಿಖೆ ಚುರುಕುಗೊಳಿಸಿದ ಸಿಬಿಐ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಮೊನ್ನೆಯಷ್ಟೆ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ವಿಚಾರಣೆ ನಡೆಸಿದ್ದರು.

ಅದರ ಬೆನ್ನಲ್ಲೇ ಧಾರವಾಡಕ್ಕೂ ಬಂದಿರುವ ಸಿಬಿಐ ಅಧಿಕಾರಿಗಳು ಉಪನಗರ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಸಂಗತಿ ತಿಳಿದು ಬಂದಿದೆ.

ಯೋಗೀಶ್​ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯನಾಶ ಆರೋಪದ ಮೇಲೆ ಮತ್ತೊಂದು ಎಫ್‌ಐಆರ್ ದಾಖಲಿಸಲು ಸಿಬಿಐ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಕೇಳಿದ್ದಾರೆ ಎನ್ನಲಾಗುತ್ತಿದೆ.

ನ್ಯಾಯಾಧೀಶರ ಬಳಿ ಅನುಮತಿ ಕೇಳಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ಧಾರವಾಡ ಜಿಲ್ಲೆಯ ನ್ಯಾಯಾಲಯದ ನ್ಯಾಯಾಧೀಶರನ್ನು ಅಧಿಕಾರಿಗಳು ಭೇಟಿಯಾಗಿದ್ದಾರೆ.

ಕೊಲೆ ಪ್ರಕರಣದ ಸಾಕ್ಷ್ಯನಾಶ ಆಗಿದೆ ಎಂದು ಮನವರಿಕೆ‌ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಾಂಗ್ರೆಸ್ ಪ್ರಭಾವಿ ರಾಜಕಾರಣಿ ಸೇರಿದಂತೆ ಹಲವರ ವಿರುದ್ಧ ಸಾಕ್ಷನಾಶದ ಆರೋಪ ಕೇಳಿಬಂದಿತ್ತು.

Kshetra Samachara

Kshetra Samachara

11 days ago

Cinque Terre

48.96 K

Cinque Terre

0