ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಲಿರುವ ಅಭಿಷೇಕ: ಬಿಗಿ ಪೊಲೀಸ್ ಬಂದೋಬಸ್ತ್

ಹುಬ್ಬಳ್ಳಿ: ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಈಗಾಗಲೇ ಸಿದ್ಧತೆ ಮಾಡಿದ್ದು, ಕೋಮುಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅಭಿಷೇಕ ಹಿರೇಮಠ ಪೊಲೀಸ್ ಬಿಗಿ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾನೆ.

ಹೌದು.ಅಭಿಷೇಕ ಹಿರೇಮಠ ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ಹಳೆ ಹುಬ್ಬಳ್ಳಿ ಗಲಭೆಗೆ ಕಾರಣವಾಗಿದ್ದ ಯುವಕನಿಗೆ ಪರೀಕ್ಷೆ ಬರೆಯಲು ಕೋರ್ಟ್ ಅನುಮತಿ ನೀಡಿರುವ ಬೆನ್ನಲ್ಲೇ ಮಹೇಶ ಪಿಯು ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಲಿರುವ ಅಭಿಷೇಕ ಇಂದು ಬಿಜಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆಗೆ 10:15ಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಲಿದ್ದಾನೆ. ಹುಬ್ಬಳ್ಳಿಯ ಕಾರಾಗ್ರಹದಿಂದ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಬರಲಿರುವ ಅಭಿಷೇಕ, ಪರೀಕ್ಷೆ ಬರೆದ ಬಳಿಕ ಮತ್ತೆ ಪೊಲೀಸ್ ಭದ್ರತೆಯಲ್ಲಿ ಜೈಲು ಸೇರಲಿದ್ದಾನೆ.

ಇನ್ನೂ ಪರೀಕ್ಷೆ ಮುಗಿಯುವವರೆಗೂ ಇದೇ ರೀತಿ ನಡೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದ್ದು, ಅಭಿಷೇಕ ಪರ ಜಾಮೀನಿಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ತಿರಸ್ಕರಿಸಿ, ನ್ಯಾಯಾಲಯ ಪರೀಕ್ಷೆಗೆ ಅನುವು ಮಾಡುಕೊಟ್ಟಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

22/04/2022 09:32 am

Cinque Terre

138.81 K

Cinque Terre

21

ಸಂಬಂಧಿತ ಸುದ್ದಿ