ಹುಬ್ಬಳ್ಳಿ: ಮೊನ್ನೆ ಶನಿವಾರ ರಾತ್ರಿ ನಡೆದ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಯುವಕ ಅಭಿಷೇಕ ಹಿರೇಮಠ ಕೋರ್ಟ್ ಅಪ್ಪಣೆಯ ಮೇರೆಗೆ ಪರೀಕ್ಷೆಗೆ ಹಾಜರಾಗುತ್ತಿದ್ದು, ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ಜೊತೆಗೆ ಮತ್ತಷ್ಟು ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹೌದು. ಆರೋಪಿ ಅಭಿಷೇಕ ಹಿರೇಮಠ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ನಗರದ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಜೊತೆಗೆ ಸೂಕ್ತ ಭದ್ರತೆ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/04/2022 10:54 am