ಧಾರವಾಡ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಧಾರವಾಡದ ವಿಶ್ವೇಶ್ವರಯ್ಯ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಅಧ್ಯಕ್ಷ ಬಸವರಾಜ ಯಡವಣ್ಣವರ ಅವರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಕಾಲೇಜು ಅಧ್ಯಕ್ಷ ಬಸವರಾಜ ವಿದ್ಯಾರ್ಥಿನಿಯರನ್ನು ದಾಂಡೇಲಿ, ಗೋವಾಕ್ಕೆ ಕರೆದುಕೊಂಡು ಹೋಗಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಸಂಬಂಧ ಸ್ವತಃ ವಿದ್ಯಾರ್ಥಿನಿಯರೇ ಕಾಲೇಜಿನ ಅಧ್ಯಕ್ಷ ಬಸವರಾಜ ಯಡವಣ್ಣವರ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಪ್ರೋತ್ಸಾಹಿಸಿದ ಕಾಲೇಜಿನ ಪ್ರಾಚಾರ್ಯ ಕುರುವತ್ತಿಗೌಡರ ಅವರ ಮೇಲೆ ದೂರು ದಾಖಲಿಸಿದ್ದರು.
ದೂರು ದಾಖಲಾದ ಬಳಿಕ ಪ್ರಾಚಾರ್ಯ ಕುರುವತ್ತಿಗೌಡರ ಅವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಅಧ್ಯಕ್ಷ ಬಸವರಾಜ ತಲೆಮರೆಸಿಕೊಂಡಿದ್ದ. ಇದೀಗ ಕಾಲೇಜು ಅಧ್ಯಕ್ಷನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/08/2022 01:50 pm