ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣಪುಟ್ಟ ಕಾರಣಕ್ಕೆ ಗಲಾಟೆ ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ ಹಳ್ಳ ಹಿಡಿದಂತಾಗಿದೆ. ಅದೆಷ್ಟೋ ನಿಯಮಗಳನ್ನು ಜಾರಿಗೊಳಿಸಿದರೂ ಕೂಡ ಅವಳಿನಗರದ ಲಗಾಮು ಪೊಲೀಸರ ಕೈಗೆ ಸಿಗದೇ ಇರುವುದರಿಂದ ಗೃಹ ಇಲಾಖೆ ಆಟಕ್ಕೆ ಉಂಟು, ಲೆಕ್ಕಕ್ಕೆ ಇಲ್ಲದಂತಾಗಿದೆ.
ಹೌದು... ಅವಳಿನಗರದಲ್ಲಿ ದಿನಾಲೂ ಕೊಲೆ, ದರೋಡೆ, ಚಾಕು ಇರಿತ, ಮೀಟರ್ ಬಡ್ಡಿ ಕುಳಗಳ ಅಟ್ಟಹಾಸ ಮಿತಿ ಮೀರಿದೆ. ಮುಖ್ಯಮಂತ್ರಿಯವರ ತವರು ಹುಬ್ಬಳ್ಳಿ- ಧಾರವಾಡದಲ್ಲಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಲೆ, ಕೊಲೆ ಯತ್ನ, ಹಲ್ಲೆಯಂಥ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಚಾಕು, ಚೂರಿ, ತಲ್ವಾರ್ ಮತ್ತಿತರ ಮಾರಕಾಸ್ತ್ರ ಆಟಿಕೆಯಂತಾಗಿವೆ.
ಕೇವಲ ಎರಡೂವರೆ ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆದಿರುವ 38 ಕೊಲೆಗಳು ಪುಷ್ಟಿ ನೀಡುತ್ತಿವೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಳೇ ಹುಬ್ಬಳ್ಳಿ ಕೋಮು ಗಲಭೆ ನಂತರ ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ನೆತ್ತರು ಹರಿಯುತ್ತಲೇ ಇದೆ. ಇದಕ್ಕೆ ಉದಾಹರಣೆ ಗುರೂಜಿ ಚಂದ್ರಶೇಖರ ಹತ್ಯೆ, ಹೆಣ್ಣು, ಹೊನ್ನು, ಮಣ್ಣು ವಿಚಾರವಾಗಿ ಒಂದಷ್ಟು ಕೊಲೆಗಳು ನಡೆದಿದ್ದರೆ, ಮತ್ತಷ್ಟು ಕೊಲೆಗಳು ಮೀಟರ್ ಬಡ್ಡಿ, ಹಳೇ ವೈಷಮ್ಯದ ವಿಚಾರಕ್ಕೆ, ಗುಟ್ಕಾ, ಸಿಗರೇಟ್, ಎಗ್‌ರೈಸ್‌ನಂತಹ ಕ್ಷುಲ್ಲಕ ಕಾರಣಕ್ಕೂ ಕೊಲೆ ನಡೆದಿರುವುದು ದುರಂತ. ಇದಕ್ಕೆಲ್ಲ ಗೃಹ ಇಲಾಖೆ ಹಾಗೂ ಪೊಲೀಸರ ವೈಫಲ್ಯವೇ ಕಾರಣವಾಗಿದೆ.
* ಬೈಟ್: ಜಗದೀಶ್ ಶೆಟ್ಟರ್ , ಮಾಜಿ ಸಿಎಂ
ಇನ್ನೂ ಘಟನೆ ನಡೆದಾಗ ಎಫ್ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದು ಬಿಟ್ಟರೆ, ಪೊಲೀಸರು ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ಮರೆತಂತೆ ಕಾಣುತ್ತಿದೆ. ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಅವಳಿ ನಗರದಲ್ಲಿ ಕೆಲಸ ಮಾಡುತ್ತಿದ್ದಾರೆಂಬುದು ಸಂತೋಷದ ವಿಚಾರ. ಆದರೆ, ಈ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಯಾಕೆ ವಿಫಲರಾಗುತ್ತಿದ್ದಾರೆ ಎಂಬುದು ನಾಗರಿಕರ ಪ್ರಶ್ನೆ. ಈ ಬಗ್ಗೆ ಮಾಜಿ ಸಿಎಂ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.
ಬೈಟ್: ಜಗದೀಶ್ ಶೆಟ್ಟರ್, ಮಾಜಿ ಸಿಎಂ
ಒಟ್ಟಿನಲ್ಲಿ ಕ್ರೈಂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಯಾವ ಸಮಯದಲ್ಲಿ ಏನಾಗುತ್ತದೆಯೋ ಎಂಬುವಂತ ಆತಂಕದಲ್ಲಿಯೇ ಓಡಾಡುವಂತಾಗಿದೆ. ಇನ್ನಾದರೂ ಗೃಹ ಸಚಿವರು ಹಾಗೂ ಪೊಲೀಸ್ ಕಮಿಷನರೇಟ್ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕಿದೆ.
Kshetra Samachara
20/07/2022 02:42 pm