ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ಸರ್ಕಾರಿ ಬಸ್ ಚಾಲಕನ ಮೇಲೆ ನಡು ರಸ್ತೆಯಲ್ಲಿಯೇ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ ಬಳಿ ನಡೆದಿದೆ.
ನ್ಯೂ ಇಂಗ್ಲಿಷ್ ಸ್ಕೂಲ್ ಬಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೇ ಯುವಕ ಬಸ್ ಚಾಲಕನ ಜೊತೆ ಜಗಳವನ್ನು ತೆಗೆದಿದ್ದಾನೆ,ಅಷ್ಟೇ ಅಲ್ಲದೆ ನಡುರಸ್ತೆಯಲ್ಲಿಯೇ ಬಸ್ ಚಾಲಕನ ಮೇಲೆ ಹಲ್ಲೆ ಕೂಡಾ ಮಾಡಿದ್ದಾನೆ.
ಸ್ಥಳೀಯರು ಯುವಕನಿಗೆ ಎಷ್ಟೇ ಬುದ್ಧಿವಾದ ಹೇಳಿದ್ರು ಕೂಡಾ ಕುಡಿದ ಮತ್ತಿನಲ್ಲಿದ್ದ ಯುವಕ ಯಾರು ಮಾತನ್ನು ಕೇಳದೆ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ,ಹುಬ್ಬಳ್ಳಿಯ ಕಸಬಾಪೇಟ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿನಯ ರೆಡ್ಡಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/09/2022 03:11 pm