ಹುಬ್ಬಳ್ಳಿ: ಗಂಗಿವಾಳ ಗ್ರಾಮ ಪಂಚಾಯಿತಿ ಸದಸ್ಯ ದೀಪಕ ಪಟದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ತನಿಖೆ ಸಿಐಡಿ ಮೆಟ್ಟಿಲೇರಿದೆ.
ಹೌದು..ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ಜು. 4ರಂದು ಕೊಲೆಯಾಗಿದ್ದ ದೀಪಕ ಪಟದಾರಿ. ಈ ಕೊಲೆ ಹಿಂದೆ ಪೊಲೀಸ್ ಕೈವಾಡದ ಶಂಕೆ ವ್ಯಕ್ತಪಡಿಸಿದ್ದ ಕುಟುಂಬಸ್ಥರು, ಪೊಲೀಸ್ ಕಮೀಷನರ್ ಹಾಗೂ ಕೋರ್ಟ್ ಮೆಟ್ಟಿಲೇರಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಪ್ರಕರಣ ಸಿಐಡಿಗೆ ನೀಡಿದೆ.
ಇನ್ನೂ 5 ವರ್ಷದ ಹಿಂದೆ ದೀಪಕ, ಮೇಟಿ ಕುಟುಂಬದ ಹುಡುಗಿಯನ್ನು ಪ್ರೀತಿಸಿ ಮದುವೆ ಆಗಿದ್ದ. ಇದಕ್ಕೆ ಹುಡುಗಿ ಮನೆಯವರ ಸಮ್ಮತಿ ಇರಲಿಲ್ಲ. ಇದೇ ವಿಚಾರವಾಗಿ ಆಕ್ರೋಶಗೊಂಡು, ಆರೋಪಿಗಳು ದೀಪಕನನ್ನು ಹತ್ಯೆಗೈದಿದ್ದಾರೆ ಎಂದು ದೀಪಕನ ಸಹೋದರ ಸಂಜಯ ಪಟದಾರಿ ಆರೋಪಿಸಿದ್ದರು. ಮೂರು ತಿಂಗಳು ಕಳೆದರೂ ಇದುವರೆಗೆ ಪ್ರಮುಖ ಆರೋಪಿಗಳನ್ನು ಬಂಧಿಸದ ಹಳೇಹುಬ್ಬಳ್ಳಿ ಠಾಣೆ ಪೊಲೀಸರು, ಹೀಗಾಗಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ದೀಪಕ ಕುಟುಂಬಸ್ಥರು ಆಗ್ರಹಿಸಿದ್ದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶಿಸಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/09/2022 12:41 pm