ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತಾಯಿ ಅಗಲಿಕೆ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಇನ್ಸ್ ಪೆಕ್ಟರ್: ಖಾಕಿ ಕರ್ತವ್ಯದ ಹಿಂದೆ ಶೋಕದ ಕಹಾನಿ

ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಠಾಣೆ ಇನ್ಸ್ ಪೆಕ್ಟರ್ ರವಿಚಂದ್ರ ಬಡಫಕೀರಪ್ಪನವರ್ ಯಶಸ್ವಿಯಾಗಿದ್ದಾರೆ. ಆದರೆ ಇದೊಂದು ಸಕ್ಸಸ್ ಚೇಜಿಂಗ್ ಹಿಂದೆ ಮೈಂಡ್ ಬ್ಲೋವಿಂಗ್ ಸ್ಟೋರಿ ಇದೆ.

ಹೌದು.. ಒಂದೇ ವಾರದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ಅವಳಿ ನಗರದಲ್ಲಿ ನಡೆದಿದ್ದವು. ಆಗ ಉಪನಗರ ಠಾಣೆಯಲ್ಲಿಯೂ ಕೂಡ ಕಳ್ಳತನವಾಗಿತ್ತು. ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ರವಿಚಂದ್ರ ಅವರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆದರೆ ತಾಯಿ ಅಗಲಿಕೆ ನಡುವೆಯೇ ಮೂರು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾದ ರವಿಚಂದ್ರ ಅವರು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿತನ ಬಗ್ಗೆ ಮಾಹಿತಿ ಕಲೆಹಾಕಿದ ಅವರು, ಬಳ್ಳಾರಿ ಮೂಲದ ಗಣೇಶ್ ಕಾಲೋನಿಯ 26 ವರ್ಷದ ಶ್ರೀಕಾಂತ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ನಗರದ ಮಿಷನ್ ಕಂಪೌಂಡ ಹತ್ತಿರ ಮನಿಯೊಂದರಲ್ಲಿ 3,20,000 ಕಿಮ್ಮತ್ತಿನ 71 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,00,000 ನಗದು ಕಳ್ಳತನ ಮಾಡಿಕೊಂಡು ಹೋಗಿದ್ದ. ಇದಲ್ಲದೇ ಮೂರು ಪ್ರಕರಣಗಳಲ್ಲಿ ಭಾಗಿ ಆಗಿದ್ದು ಒಟ್ಟು 6,95,000/- ರೂ ಕಿಮ್ಮತ್ತಿನ 165 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,000/- ರೂ ಕಿಮ್ಮತ್ತಿನ 20 ಗ್ರಾಂ ತೂಕದ ಬೆಳ್ಳಿ ಆಭರಣ ಮತ್ತು 30,000/- ನಗದು ಹಣವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರಪಡಿಸಿ ಜೈಲಿಗೆ ಅಟ್ಟಿದ್ದು, ರವಿಚಂದ್ರ ಅವರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಬಹುಮಾನ ಘೋಷಿಸಿದ್ದಾರೆ.

Edited By : Nagaraj Tulugeri
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

23/09/2022 02:49 pm

Cinque Terre

137.21 K

Cinque Terre

34

ಸಂಬಂಧಿತ ಸುದ್ದಿ