ಧಾರವಾಡ: ಧಾರವಾಡದ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ನಾಲ್ಕು ಜನ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದು, ಇದನ್ನು ವಿರೋಧಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ನುಗ್ಗಿಕೇರಿ ಆಂಜನೇಯ ಸ್ವಾಮಿ ದೇವಸ್ಥಾನ ಕಮಿಟಿಯವರಿಗೆ ಮೊದಲೇ ಮನವಿ ಸಲ್ಲಿಸಿದ್ದರು. ಆದರೆ, ಕಳೆದ ಶನಿವಾರ ಶ್ರೀರಾಮ ಸೇನೆ ಕಾರ್ಯಕರ್ತರು ಏಕಾಏಕಿ ನಬಿಸಾಬ್ ಎಂಬುವವರ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದು, ಆ ನಾಲ್ಕೂ ಜನರನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಧಾರವಾಡ ಗ್ರಾಮೀಣ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಠಾಣೆಗೆ ಮುತ್ತಿಗೆ ಹಾಕಿದ್ದರಿಂದ ಹೆಚ್ಚುವರಿ ಪೊಲೀಸರನ್ನು ಭದ್ರತೆಗಾಗಿ ಠಾಣೆ ಮುಂದೆ ನಿಯೋಜಿಸಲಾಗಿತ್ತು.
Kshetra Samachara
11/04/2022 06:16 pm