ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರ ಮೂಲದ ವಿದ್ಯಾರ್ಥಿಗಳು ಇಂದು ಹುಬ್ಬಳ್ಳಿಯಲ್ಲಿ ನಡೆದ ವಿಚಾರಣೆಗೆ ಹಾಜರಾಗಿದ್ದು,5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ವಿಚಾರಣೆಯನ್ನು ಮಾರ್ಚ್ 10ಕ್ಕೆ ಮುಂದೂಡಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದರಿಸುತ್ತಿರುವ ಕಾಶ್ಮೀರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಬುಧವಾರ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಭಾರಿ ಪೊಲೀಸ್ ಭದ್ರತೆಯಲ್ಲಿ ಮೂವರು ಆರೋಪಿತ ವಿದ್ಯಾರ್ಥಿಗಳು ಹಾಜರಾಗಿದ್ದರು.
ಇನ್ನೂ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾದೀಶರಾದ ಗಂಗಾಧರ ಅವರು ಮಾರ್ಚ್ 10ಕ್ಕೆ ಮುಂದೂಡಿದ್ದಾರೆ.ಫೆಬ್ರವರಿ 15, 2020ರಂದು ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿಂದು ವಿಚಾರಣೆ ಹಾಜರಾಗಿದ್ದರು.
Kshetra Samachara
03/02/2021 02:01 pm