ಧಾರವಾಡ: ಸಾಗವಾನಿ ಮರಗಳನ್ನು ತುಂಡರಿಸಿ ಅವುಗಳನ್ನು ಸೋಫಾ ಸೆಟ್ ಗೆ ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹೊನ್ನಾಪುರ ಗ್ರಾಮದ ನಿಂಗಪ್ಪ ಕಲ್ಲಪ್ಪ ಗಸ್ತಿ ಹಾಗೂ ಪುಂಡಲೀಕ ಕಲ್ಲಪ್ಪ ಗಸ್ತಿ ಎಂಬುವವರೇ ಬಂಧಿತ ಆರೋಪಿಗಳು.
ಇವರು ಹೊನ್ನಾಪುರ ಅರಣ್ಯ ವ್ಯಾಪ್ತಿಯ ಪ್ರದೇಶದಲ್ಲಿನ ಬೆಲೆಬಾಳುವ ಸಾಗವಾನಿ ಮರಗಳನ್ನು ಕತ್ತರಿಸಿ ಪೀಠೋಪಕರಣಗಳನ್ನು ಮಾಡಿ ಮಾರಾಟ ಮಾಡುತ್ತಿದ್ದರು. ಇವರು ಈ ಹಿಂದೆ ಇದೇ ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದರು. ಇದೀಗ ಇಬ್ಬರನ್ನೂ ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದು, ಬಂಧಿತರಿಂದ 1 ಲಕ್ಷ ಮೌಲ್ಯದ ಸಾಗವಾನಿ ಕಟ್ಟಿಗೆಯ ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸದ್ಯ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Kshetra Samachara
24/02/2021 07:30 pm