ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೂರು ಜನರಿಂದ ರಿಯಲ್ ಎಸ್ಟೇಟ್ ಉದ್ಯಮಿಯ ಅಪಹರಣವಾಗಿತ್ತಂತೆ

ಧಾರವಾಡ: ಧಾರವಾಡದ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ ನಾಯ್ಡು ಅವರನ್ನು ಮೂರು ಜನ ಕಾರಿನಲ್ಲಿ ಬಂದು ಅಪಹರಿಸಿಕೊಂಡು ಹೋಗಿದ್ದರು ಎಂದು ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿರುವ ಅವರು, ಶ್ರೀನಿವಾಸ ಅವರು ಇಟಿಗಟ್ಟಿ ಬಳಿ ಜಮೀನು ನೋಡಲೆಂದು ಹೋದಾಗ ಮೂವರು ಕಾರಿನಲ್ಲಿ ಬಂದು ಅವರ ಕಣ್ಣಿಗೆ ಕಾರದಪುಡಿ ಹಾಕಿ ಅಪಹರಣ ಮಾಡಿಕೊಂಡು ಹೋಗಿದ್ದರು. ಶ್ರೀನಿವಾಸ ಅವರ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದರ ಮೇರೆಗ ಪತ್ತೆ ಕಾರ್ಯಾಚರಣೆ ನಡೆಸಲಾಗಿ ಅಪಹರಣಕಾರರು ಶ್ರೀನಿವಾಸ ಅವರನ್ನು ದೇವರಹುಬ್ಬಳ್ಳಿ ಬಳಿ ಬಿಟ್ಟು ಹೋಗಿದ್ದಾರೆ.

ಸದ್ಯ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ಆರೋಪಿತರನ್ನು ಪತ್ತೆ ಮಾಡಲಾಗುವುದು ಎಂದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

30/07/2021 09:44 pm

Cinque Terre

89.83 K

Cinque Terre

3

ಸಂಬಂಧಿತ ಸುದ್ದಿ