ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅತ್ಯಾಚಾರ ಎಸಗಿದ ಅಪರಾಧಿಗೆ 10 ವರ್ಷ ಜೈಲು, 60 ಸಾವಿರ ದಂಡ

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿದೆ.

ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಗಾಣಿಗೇರ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು, ನೊಂದ ಯುವತಿಯ ಸಂಬಂಧಿಕನಾದ ಈತ ಗುಡಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015 ಅಕ್ಟೋಬರ್ 7 ರಂದು ಯುವತಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದ. ಈ ಕುರಿತು ಆರೋಪಿಯ ವಿರುದ್ಧ ಗುಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿರಾದಾರ ದೇವೇಂದ್ರಪ್ಪ ಎನ್. ಅವರು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಗಿರಿಜಾ ಎಸ್. ತಮ್ಮಿನಾಳ ವಾದ ಮಂಡಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

02/09/2021 11:36 am

Cinque Terre

40.17 K

Cinque Terre

7

ಸಂಬಂಧಿತ ಸುದ್ದಿ