ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮತಾಂತರ ಆರೋಪ ಸೋಮು ಅವರಾಧಿ ಪೊಲೀಸ್ ವಶಕ್ಕೆ: ಡಿಸಿಪಿ ವರ್ಗಾವಣೆಗೆ ಪಟ್ಟು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ಆರೋಪದ ಹಿನ್ನಲೆಯಲ್ಲಿ ಸೋಮು ಅವರಾಧಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು..ಸೋಮು ಅವರಾಧಿಯನ್ನು ನವನಗರ ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ನಂತರ ದೂರು ನೀಡಿದ ವಿಶ್ವನಾಥ ಬೂದೂರು ಮತ್ತಿತರರನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ಪಂಚನಾಮೆ ನಡೆಸಿದ್ದಾರೆ.

ನವನಗರದ ಚರ್ಚ್ ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಚರ್ಚಿಗೆ ತೆರಳಿದ್ದ ಹಿಂದೂಪರ ಸಂಘಟನೆಗಳ ಮುಖಂಡರು ಭಜನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರ ನೇತೃತ್ವದಲ್ಲಿ ನವನಗರದ ಬಳಿ ರಸ್ತೆ ತಡೆ ನಡೆದಿತ್ತು.

ಅದಾದ ಬಳಿಕ ತಡರಾತ್ರಿಯ ತನಕ ನವನಗರದ ಎಪಿಎಂಸಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಶಾಸಕ ಅರವಿಂದ ಬೆಲ್ಲದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅವರಾಧಿ ಬಂಧನಕ್ಕೆ ಪಟ್ಟು ಹಿಡಿಯಲಾಗಿತ್ತು. ಪೊಲೀಸ್ ಕಮಿಷನರ್ ಲಾಭುರಾಮ್ ಕಾನೂನು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಗಿತ್ತು. ಇದೀಗ ಸೋಮು ಅವರಾಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಮತ್ತೊಂದೆಡೆ ಡಿಸಿಪಿ ರಾಮರಾಜನ್ ವರ್ಗಾವಣೆಗೆ ಹಿಂದೂಪರ ಸಂಘಟನೆಗಳ ಮುಖಂಡರು ಪಟ್ಟು ಹಿಡಿದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

18/10/2021 06:45 pm

Cinque Terre

77.81 K

Cinque Terre

25

ಸಂಬಂಧಿತ ಸುದ್ದಿ