ಧಾರವಾಡ: ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಪ್ರಥಮ ದರ್ಜೆ ಗುತ್ತಿಗೆದಾರ ಯು.ಬಿ.ಶೆಟ್ಟಿ ಅವರ ಮನೆ ಮೇಲೆ ದಾಳಿ ನಡೆಸಿ ನಿನ್ನೆಯಿಂದ ವಿಚಾರಣೆ ನಡೆಸುತ್ತಿರುವ ಐಟಿ ಅಧಿಕಾರಿಗಳು ಯು.ಬಿ.ಶೆಟ್ಟಿ ಅವರ ಪತ್ನಿ ಹಾಗೂ ಮಗಳನ್ನು ಕೆವಿಜಿ ಬ್ಯಾಂಕ್ ಗೆ ಕರೆದುಕೊಂಡು ಹೋಗಿ ಅವರ ಬ್ಯಾಂಕ್ ವಿವರ ಪಡೆಯುತ್ತಿದ್ದಾರೆ.
ಯು.ಬಿ.ಶೆಟ್ಟಿ ಅವರ ಮನೆಯ ಎದುರೇ ಇರುವ ಅಪಾರ್ಟ್ ಮೆಂಟ್ ನಲ್ಲಿ ಕೆವಿಜಿ ಬ್ಯಾಂಕ್ ಇದ್ದು, ಅಲ್ಲಿಗೆ ಕರೆದುಕೊಂಡು ಹೋಗಿ ಇಬ್ಬರ ಬ್ಯಾಂಕ್ ವಿವರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರ ಆಪ್ತ ಯು.ಬಿ.ಶೆಟ್ಟಿ ಅವರ ಪತ್ನಿಯ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್ ನ್ನು ಐಟಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
Kshetra Samachara
29/10/2021 02:43 pm