ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಕಲಿ-ಅಸಲಿ ವಿದ್ಯಾರ್ಥಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಧಾರವಾಡ ನ್ಯಾಯಾಲಯ

ಧಾರವಾಡ: 2007ನೇ ಸಾಲಿನಲ್ಲಿ ಧಾರವಾಡದ ಎಸ್‍ಡಿಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಅದೇ ಕಾಲೇಜಿನ ಓರ್ವ ವಿದ್ಯಾರ್ಥಿಯು ತನ್ನ ಬದಲಿಗೆ ಬೇರೊಬ್ಬ ಅಭ್ಯರ್ಥಿಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಅಸಲಿ ಅಭ್ಯರ್ಥಿಯನ್ನಾಗಿ ರೂಪುಗೊಳಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿದ್ದ.

08-07-2008 ರಂದು ಈ ನಕಲಿ ವಿದ್ಯಾರ್ಥಿ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆಯುವಾಗ ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿ ಯುನಿವರ್ಸಿಟಿಯ ಅಧಿಕಾರಿಗಳ ಪರಿಶೀಲನೆ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ. ಈ ಸಂಬಂಧ ಕಾಲೇಜು ಪ್ರಾಂಶುಪಾಲರು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಈ ಬಗ್ಗೆ ತನಿಖೆ ಕೈಗೊಂಡಿದ್ದ ಎಎಸ್ಐ ಎಸ್.ಎಫ್ ದೊಡಮನಿ, ಇನ್ಸ್‌ಪೆಕ್ಟರ್ ವಿಜಯ ಬಿರಾದಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಮೂರನೇ ಹೆಚ್ಚುವರಿ ಪ್ರಧಾನ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶ ಮಹೇಶ ಚಂದ್ರಕಾಂತ ಅವರು ಇಬ್ಬರು ಆರೋಪಿತರು ತಪ್ಪಿತಸ್ಥರೆಂದು ತಿರ್ಮಾನಿಸಿ, ಇಬ್ಬರೂ ವಿದ್ಯಾರ್ಥಿಗಳಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು ತಲಾ ಐದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ವಕೀಲರಾದ ಆರ್.ಜಿ.ದೇವರೆಡ್ಡಿ ಹಾಗೂ ಅನೀಲಕುಮಾರ ಆರ್.ತೊರವಿ ವಕಾಲತ್ತು ವಹಿಸಿದ್ದರು.

Edited By :
Kshetra Samachara

Kshetra Samachara

04/12/2021 06:27 pm

Cinque Terre

45.24 K

Cinque Terre

3

ಸಂಬಂಧಿತ ಸುದ್ದಿ