ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಮಾರಾಟ ಪ್ರಕರಣ ಸಾಬೀತು: ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಆನಂದ ಒನಕುದ್ರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ 1100 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಮಂಜುನಾಥ ಭಟ್ ಅಡಿಗ ತೀರ್ಪು ನೀಡಿದ್ದಾರೆ.

ಇನ್ನೂ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ವಿ. ಪಾಟೀಲ ವಾದ ಮಂಡಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

10/12/2021 04:19 pm

Cinque Terre

22.65 K

Cinque Terre

0

ಸಂಬಂಧಿತ ಸುದ್ದಿ