ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಾಸ್ಟೇಲ್ ಬಳಿ ಗಾಂಜಾ ಮಾರಾಟ- ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್ ಆನಂದ ಒನಕುದ್ರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ 1.1 ಕೆಜಿ ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಉಮೇಶ ಮಂಜುನಾಥ ಭಟ್ ಅಡಿಗ ಆದೇಶ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ವಿ. ಪಾಟೀಲ ವಾದ ಮಂಡಿಸಿದ್ದರು.

Edited By : Vijay Kumar
Kshetra Samachara

Kshetra Samachara

12/12/2021 10:51 am

Cinque Terre

86.09 K

Cinque Terre

7

ಸಂಬಂಧಿತ ಸುದ್ದಿ