ಧಾರವಾಡ: ಧಾರವಾಡದ ಹಿರಿಯ ಸಂಶೋಧಕರಾಗಿದ್ದ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಆರೋಪಿಗಳನ್ನು ಪೊಲೀಸರು ಬಿಗಿ ಬಂದೋಬಸ್ತ್ ಮಧ್ಯೆ ಧಾರವಾಡದ ನಾಲ್ಕನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಂದು ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಅಮೋಲ್ ಕಾಳೆ, ಪ್ರವೀಣ ಚತುರ್, ಗಣೇಶ ಮಿಸ್ಕಿನ್, ಅಮಿತ್ ಬುದ್ಧಿ, ವಾಸುದೇವ ಸೂರ್ಯವಂಶಿ ಹಾಗೂ ಶರತ್ ಕಲಾಸ್ಕರ್ ಎಂಬ ಆರು ಜನ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಈ ಆರೂ ಜನ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಬಿಳಿ ಬಣ್ಣದ ಬಟ್ಟೆ ಧರಿಸಿಕೊಂಡು ಬಂದಿದ್ದು ಗಮನಸೆಳೆದಿದೆ.
2015ರ ಆಗಸ್ಟ್ 30 ರಂದು ಧಾರವಾಡ ಕಲ್ಯಾಣನಗರದಲ್ಲಿ ಆರೋಪಿಗಳು ಕಲಬುರ್ಗಿ ಅವರ ಹಣೆಗೆ ಗುಂಡಿಟ್ಟು ಹತ್ಯೆ ಮಾಡಿದ್ದರು. ಸದ್ಯ ಈ ಕೊಲೆ ವಿಚಾರಣೆ ನಡೆಯುತ್ತಿದ್ದು, ಆರೋಪಿಗಳಿಗೆ ನ್ಯಾಯಾಲಯ ಯಾವ ಪ್ರಮಾಣದ ಶಿಕ್ಷೆ ವಿಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಸ್ಲಗ್: ಕಲ್ಬುರ್ಗಿ ಹತ್ಯೆ ಪ್ರಕರಣದ ತೀರ್ಪು ಇಂದು ಪ್ರಕಟ?ಧಾರವಾಡ: ಡಾ.ಕಲಬುರ್ಗಿ ಹತ್ಯೆ ಆರೋಪಿಗಳು ಮತ್ತೆ ಕೋರ್ಟ್‌ಗೆ ಹಾಜರು: ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ
ಧಾರವಾಡ: ಧಾರವಾಡದ ಹಿರಿಯ ಸಂಶೋಧಕರಾಗಿದ್ದ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಆರೋಪಿಗಳನ್ನು ಪೊಲೀಸರು ಬಿಗಿ ಬಂದೋಬಸ್ತ್ ಮಧ್ಯೆ ಧಾರವಾಡದ ನಾಲ್ಕನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಇಂದು ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಅಮೋಲ್ ಕಾಳೆ, ಪ್ರವೀಣ ಚತುರ್, ಗಣೇಶ ಮಿಸ್ಕಿನ್, ಅಮಿತ್ ಬುದ್ಧಿ, ವಾಸುದೇವ ಸೂರ್ಯವಂಶಿ ಹಾಗೂ ಶರತ್ ಕಲಾಸ್ಕರ್ ಎಂಬ ಆರು ಜನ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಈ ಆರೂ ಜನ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಬಿಳಿ ಬಣ್ಣದ ಬಟ್ಟೆ ಧರಿಸಿಕೊಂಡು ಬಂದಿದ್ದು ಗಮನಸೆಳೆದಿದೆ.
2015ರ ಆಗಸ್ಟ್ 30 ರಂದು ಧಾರವಾಡ ಕಲ್ಯಾಣನಗರದಲ್ಲಿ ಆರೋಪಿಗಳು ಕಲಬುರ್ಗಿ ಅವರ ಹಣೆಗೆ ಗುಂಡಿಟ್ಟು ಹತ್ಯೆ ಮಾಡಿದ್ದರು. ಸದ್ಯ ಈ ಕೊಲೆ ವಿಚಾರಣೆ ನಡೆಯುತ್ತಿದ್ದು, ಆರೋಪಿಗಳಿಗೆ ನ್ಯಾಯಾಲಯ ಯಾವ ಪ್ರಮಾಣದ ಶಿಕ್ಷೆ ವಿಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/04/2022 04:45 pm