ಧಾರವಾಡ: ಎಪ್ರಿಲ್ 9ರಂದು ಧಾರವಾಡದ ಪ್ರಸಿದ್ಧ ನುಗ್ಗಿಕೇರಿ ದೇವಸ್ಥಾನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶ್ರೀರಾಮ ಸೇನೆಯ ನಾಲ್ಕು ಜನ ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದೆ.
ಧಾರವಾಡದ ನುಗ್ಗಿಕೇರಿಯಲ್ಲಿ ವ್ಯಾಪಾರ ಮಾಡಬೇಡಿ ಎಂದು ಮುಸ್ಲಿಂ ವ್ಯಾಪಾರಿ ನಬಿಸಾಬ್ ಎಂಬುವರಿಗೆ ಸೇರಿದ ಕಲ್ಲಂಗಡಿ ಹಣ್ಣುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರಾದ ಮೈಲಾರಪ್ಪ, ಮಹಾಲಿಂಗ, ಚಿದಾನಂದ ಹಾಗೂ ಕುಮಾರ ಎಂಬುವವರು ಒಡೆದು ಹಾಕಿದ್ದಾರೆ ಎಂದು ಆರೋಪಿಸಿ ನಬಿಸಾಬ್ ಇವರ ಮೇಲೆ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ನಾಲ್ಕೂ ಜನರನ್ನು ಬಂಧಿಸಲಾಗಿತ್ತು.
ಇದೀಗ ಈ ನಾಲ್ಕೂ ಜನರಿಗೆ ಧಾರವಾಡದ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಾಲ್ಕೂ ಜನ ಜೈಲಿನಿಂದ ಹೊರಬರುತ್ತಿದ್ದಂತೆ ಅವರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಕೇಸರಿ ಶಾಲು ಹಾಕಿ, ಅದೇ ಕಲ್ಲಂಗಡಿ ಹಣ್ಣಿನ ಮೇಲೆ ಕರ್ಪೂರ ಬೆಳಗಿ, ಅದನ್ನು ಒಡೆದು ಬರಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/04/2022 10:58 pm