ಹುಬ್ಬಳ್ಳಿ: ಇಷ್ಟು ದಿನ ತಣ್ಣಗಿದ್ದ ವಾಣಿಜ್ಯನಗರಿಯಲ್ಲಿ ರಾತ್ರೋರಾತ್ರಿ ಅಶಾಂತಿ ಸೃಷ್ಟಿಯಾಗಿದ್ದು, ಗಲಾಟೆಗೆ ಕಾರಣವಾಗಿದ್ದವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಬಂಧಿತರ ಸಂಬಂಧಿಕರು ಠಾಣೆಯ ಎದುರು ಹೈ ಡ್ರಾಮಾ ಸೃಷ್ಟಿಸಿದ್ದಾರೆ.
ಹೌದು. ಇಸ್ಲಾಂ ಧರ್ಮದ ಧಾರ್ಮಿಕತೆಗೆ ಧಕ್ಕೆ ಉಂಟಾಗುವ ಪೋಸ್ಟ್ ಮಾಡಿದ್ದ ಯುವಕನನ್ನು ಬಂಧನ ಮಾಡಿದ್ದರೂ ಕಲ್ಲು ತೂರಾಟ ನಡೆಸಿ ಗಲಾಟೆ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಬಂಧಿತರ ಸಂಬಂಧಿಕರು ಪೊಲೀಸ್ ಠಾಣೆಗೆ ಆಗಮಿಸಿ ಸಂಬಂಧಿಕರನ್ನು ಕೈ ಬಿಡುವಂತೆ ಗಲಾಟೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರ ಹಾಗೂ ಬಂಧಿತರ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆದಿದೆ.
ಇನ್ನು ಬಂಧಿತರನ್ನು ಬೇರೆ ಕಡೆಗೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ಆರೋಪಿಗಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಜತೆ ವಾಗ್ವಾದ ನಡೆಸಿದ ಸಂಬಂಧಿಕರು, 'ನಮ್ಮ ಮಕ್ಕಳು, ಮನೆಯವರು ತಪ್ಪು ಮಾಡಿಲ್ಲ. ಸುಖಾ ಸುಮ್ಮನೆ ಬಂಧಿಸಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆ ಎದುರು ಪುಂಡರ ಪಾಲಕರ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/04/2022 04:58 pm