ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹು-ಧಾ ಪೊಲೀಸ್ ಕಮೀಷನರೇಟ್ ವಿಚಾರಣೆ ತೀವ್ರಗೊಳಿಸಿದೆ.
ಕೋಮುಗಲಭೆ ಹಿನ್ನೆಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸೂಕ್ತವಾಗಿ ತನಿಖೆ ನಡೆಸುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೇ ಬೀಡು ಬಿಟ್ಟಿರುವ ADGP ಪ್ರತಾಪ ರೆಡ್ಡಿ ಗಲಭೆ ಸಂಬಂಧ ಮುಸ್ಲಿಂ ಮುಖಂಡರ ಸಭೆ ನಡೆಸಿದ್ದಾರೆ.
ಹು-ಧಾ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಶಾಸಕ ಪ್ರಸಾದ ಅಬ್ಬಯ್ಯ, ವಿ.ಪ. ಸದಸ್ಯ ಸಲೀಂ ಅಹ್ಮದ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಅಂಜೂಮನ್ ಸಂಸ್ಥೆ ಅಧ್ಯಕ್ಷ ಯೂಸೂಫ್ ಸವಣೂರು ಸಭೆಯಲ್ಲಿ ಭಾಗವಹಿಸಿದ್ದು, ಸುದೀರ್ಘ ಒಂದೂವರೆ ಗಂಟೆ ನಡೆದ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
Kshetra Samachara
18/04/2022 08:37 pm