ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೊನ್ನೆ ನಡೆದ ಘಟನೆಯಲ್ಲಿ ಭಾಗಿಯಾದವರನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆಯನ್ನು ಪೊಲೀಸ್ ಇಲಾಖೆ ಚುರುಕುಗೊಳಿಸಿದ್ದು, ಈಗ ಮತ್ತೆ ಬಂಧಿಸಿರುವವರನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.
ಹೌದು.. 88 ಜನರನ್ನು ಬೆಳ್ಳಂಬೆಳಿಗ್ಗೆ ಕಲಬುರಗಿ ಕೇಂದ್ರೀಯ ಕಾರಾಗೃಹಕ್ಕೆ ಸ್ಥಳಾಂತರ ಮಾಡಿರುವ ಬೆನ್ನಲ್ಲೇ ಶಂಕಿತ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ.
ಈಗಾಗಲೇ ಸಾಕಷ್ಟು ರೀತಿಯಲ್ಲಿ ಕಾನೂನು ಕ್ರಮಗಳನ್ನು ಜರುಗಿಸುತ್ತಿರುವ ಪೊಲೀಸರು ಸಿಟಿಯನ್ನು ರೌಂಡ್ ಮಾಡುವ ಮೂಲಕ ಕೋಮುಗಲಭೆ ಪ್ರಕರಣವನ್ನು ಬೇಧಿಸಲು ಮುಂದಾಗಿದ್ದಾರೆ.
ಇನ್ನೂ ಬಂಧಿತರ ಪಾಲಕರು ಸ್ಟೇಷನ್ ಆವರಣಕ್ಕೆ ಆಗಮಿಸಿ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಕೊಟ್ಟಿದ್ದಾರೆ. ಇದೇ ವೇಳೆ ಹಣಕೊಡಲು ಮುಂದಾದ ಪಾಲಕರಿಗೆ ಪೊಲೀಸರು ತಡೆದು ಬುದ್ದಿ ಹೇಳಿರುವ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/04/2022 09:30 pm