ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಕಲ್ಲು ತೂರಾಟದ ಆರೋಪಿಗಳನ್ನು ವೈದ್ಯಕೀಯ ತಪಾಸಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್)ಗೆ ಕರೆದುಕೊಂಡು ಬರಲಾಯಿತು.
ಏಳು ಜನ ಬಂಧಿತ ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ ಕಿಮ್ಸ್ ಗೆ ಕರೆತರಲಾಗಿದ್ದು ತಪಾಸಣೆ ಬಳಿಕ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತದೆ.
ಈಗಾಗಲೇ ಸಾಕಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿರುವ ಪೊಲೀಸ್ ಇಲಾಖೆ ಆರೋಪಿಗಳ ಬಂಧನಕ್ಕೆ ಹಾಗೂ ಸ್ಥಳಾಂತರಕ್ಕೆ ವಿಶೇಷ ತಂಡ ರಚನೆ ಮೂಲಕ ಕಾರ್ಯಾಚರಣೆ ನಡೆಸುತ್ತಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/04/2022 07:45 pm