ಹುಬ್ಬಳ್ಳಿ: ಗಲಭೆಯ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ವಿಚಾರಣೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಲಾಭುರಾಮ್ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.
ಮಧ್ಯಾಹ್ನದ ವೇಳೆಗೆ ತಲೆಮರೆಸಿಕೊಂಡಿದ್ದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ನನ್ನು ಠಾಣೆಗೆ ಕರೆತಂದಿರುವ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಇನ್ನೂ ಪೊಲೀಸ್ ಆಯುಕ್ತರು ಠಾಣೆಗೆ ಭೇಟಿ ನೀಡಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ ತೀವ್ರಗೊಂಡಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/04/2022 08:08 pm