ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 12 ಕೇಸ್ ದಾಖಲು, 134 ಜನರ ಬಂಧನ ತನಿಖೆ ಚುರುಕುಗೊಂಡಿದೆ: ಕಮಿಷನರ್ ಲಾಭುರಾಮ್

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಕೇಸ್ ದಾಖಲು ಮಾಡಲಾಗಿದ್ದು, 134 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ತನಿಖೆಯನ್ನು ಕೈಗೊಂಡಿದ್ದಾರೆ. ಸೂಕ್ತ ಬಂದೋಬಸ್ತ್ ಜೊತೆಗೆ ನಾಳೆಯವರೆಗೂ 144 ಜಾರಿಯಲ್ಲಿ ಇರಲಿದೆ ಎಂದು ಪೊಲೀಸ್ ಆಯುಕ್ತರಾದ ಲಾಭುರಾಮ್ ಹೇಳಿದರು.

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶನಿವಾರ ರಾತ್ರಿ ಘಟನೆ ನಡೆದ ಮೂರು ನಾಲ್ಕು ಗಂಟೆಗಳ ಬಳಿಕ ಪರಿಸ್ಥಿತಿ ಶಾಂತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದರು.

ಕಸಬಾ ಪೊಲೀಸ್ ಠಾಣೆ, ಕೇಶ್ವಾಪೂರ, ಬೆಂಡಿಗೇರಿ ಹಾಗೂ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತಷ್ಟು ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಬಂಧನ ಹಾಗೂ ವಿಚಾರಣೆ ತೀವ್ರವಾಗಿ ನಡೆದಿದ್ದು, ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಅವರು ಹೇಳಿದರು.

ವಾಸೀಂ ಪಠಾಣ್ ಬಂಧನದ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಗಾವಿಯಿಂದ ವಾಸೀಂ ಪಠಾಣ್ ಎಂಬ ಆರೋಪಿಯನ್ನು ಕರೆದುಕೊಂಡು ಬರಲಾಗಿದ್ದು, ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. ಇದೇ ವೇಳೆ ಅಭಿಷೇಕ ಹಿರೇಮಠ ಪರೀಕ್ಷೆ ಕುರಿತು ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಮಗೆ ನಿರ್ದೇಶನ ನೀಡಿದೆ. ಆ ಪ್ರಕಾರ ಬಂಧಿತ ಅಭಿಷೇಕ ಹಿರೇಮಠನನ್ನು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಪರೀಕ್ಷೆಗೆ ಹಾಜರು ಪಡಿಸಲಾಗುತ್ತದೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

21/04/2022 08:24 pm

Cinque Terre

255.94 K

Cinque Terre

14

ಸಂಬಂಧಿತ ಸುದ್ದಿ