ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಕಳೆದ ಶನಿವಾರ ರಾತ್ರಿ ನಡೆದ ಕೋಮುಗಲಭೆ ಕಲ್ಲು ತೂರಾಟ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಬಿಂಬಿತವಾಗಿದ್ದ ವಾಸೀಂ ಪಠಾಣ್ ಎಂಬುವಂತ ಬಂಧಿತ ಆರೋಪಿಯನ್ನು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಹುಬ್ಬಳ್ಳಿಯ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಹಳೇ ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ವಸೀಮ್ ಪಠಾಣ್ ಕೋರ್ಟ್‌ಗೆ ಹಾಜರಾಗಿದ್ದಾನೆ. ಹೆಚ್ಚಿನ ವಿಚಾರಣೆಗೆ ಈತನನ್ನು ಪೊಲೀಸ್ ಕಸ್ಟಡಿಗೆ ಕೊಡುವಂತೆ ಪೊಲೀಸರು ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ತೌಫೀಲ್ ಹಾಗೂ ವಸೀಮ್ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಸರ್ಕಾರಿ ವಕೀಲರ ವಾದ ಮಂಡಿಸಿದ್ದಾರೆ.
ಒಟ್ಟಿನಲ್ಲಿ ಗಲಭೆಯ ಮಾಸ್ಟರ್ ಮೈಂಡ್ ಹಾಗೂ ಆತನ ಸಹಚರನನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದು, ನ್ಯಾಯಾಲಯದ ಆದೇಶವನ್ನು ಕಾದು ನೋಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/04/2022 06:18 pm