ಹುಬ್ಬಳ್ಳಿ: ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ಹಾಗೂ ತೌಫೇಲ್ ಮುಲ್ಲಾ ಎಂಬುವಂತ ಆರೋಪಿಗಳಿಗೆ ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮೂಲಕ ಕರೆದುಕೊಂಡು ಹೋಗಲಾಯಿತು.
ಬೆಳಗಾವಿಯಿಂದ ನಿನ್ನೆ ಮಧ್ಯಾಹ್ನ ವಾಸೀಂ ಪಠಾಣ್ ಎಂಬಾತನನ್ನು ಕರೆದುಕೊಂಡು ಬಂದು ತೀವ್ರ ವಿಚಾರಣೆ ನಡೆಸಲಾಗಿತ್ತು. ಅಲ್ಲದೇ ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಬೆನ್ನಲ್ಲೇ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದ್ದು, ಮತ್ತಷ್ಟು ವಿಚಾರಣೆ ನಡೆಸಲು ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಕರೆದುಕೊಂಡು ಹೋಗಿದ್ದಾರೆ.
ಈಗಾಗಲೇ 10 ದಿನಗಳ ಪೊಲೀಸ್ ಕಸ್ಟಡಿಗೆ ಹುಬ್ಬಳ್ಳಿಯ ಪೊಲೀಸರು ಕೇಳಿದ್ದು, ಐದು ದಿನ ಪೊಲೀಸ್ ಕಸ್ಟಡಿಗೆ ಆದೇಶ ನೀಡಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/04/2022 08:30 pm