ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್‌; ಈವರೆಗೂ 146 ಮಂದಿ ಅರೆಸ್ಟ್

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಸುಮಾರು 146 ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾದ್ದರೂ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಮುಲಾಜು ಇಲ್ಲದೇ ಕ್ರಮಗಳನ್ನು ಕೈಗೊಳ್ಳುವುದು ಖಂಡಿತ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ಹೇಳಿದ್ದಾರೆ.

ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಮಾಹಿತಿ ‌ನೀಡಿರುವ ಅವರು, ಪ್ರಕರಣವು ಈಗ ತನಿಖೆ ಹಂತದಲ್ಲಿದೇ ಇಲ್ಲಿಯವರೆಗೂ 146 ಜನ ಆರೋಪಿಗಳ ಬಂಧವಾಗಿದೆ. ಈಗ ಬಂಧಿತರಾದವರಲ್ಲಿ ಸುಮಾರು ಜನ ಕ್ರಿಮಿನಲ್ ಹಿನ್ನೆಲೆಯಿಂದ ಬಂದವರು ಇದ್ದಾರೆ. ಅವರ ವಿರುದ್ಧ ಕೂಡ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಖಚಿತ ಎಂದರು.

ಬಂಧಿತರಲ್ಲಿ ಇಬ್ಬರು ರೌಡಿಶೀಟರ್‌ಗಳಿದ್ದು, ಉಳಿದವರ ಹಿನ್ನೆಲೆಯನ್ನು ಪತ್ತೆ ಮಾಡಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತೇವೆ. ಯಾವುದೇ ರಾಜಕೀಯ ಪಕ್ಷಗಳು ಮುಖಂಡರು, ಅವರ ಮಕ್ಕಳು ಯಾರೇ ಕ್ರಿಮಿನಲ್ ಚಟುವಟಿಕೆಗಳಿಗೆ ಕೈ ಜೋಡಿಸಿದರೂ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದರು.

ಈಗಾಗಲೇ ಒಬ್ಬ ಕಾರ್ಪೊರೇಟರ್‌ರನ್ನು ಅರೆಸ್ಟ್ ಮಾಡಿದ್ದೇವೆ. ಮತ್ತಷ್ಟು ತನಿಖೆ ಮಾಡಿ ಮತ್ತೇ ಯಾರದಾದರೂ ರೋಲ್ ಇದ್ದರೇ ಖಂಡಿತ ಅರೆಸ್ಟ್ ಮಾಡುತ್ತೇವೆ ಎಂದು ಅವರು ಹೇಳಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/04/2022 09:53 pm

Cinque Terre

149.17 K

Cinque Terre

44

ಸಂಬಂಧಿತ ಸುದ್ದಿ