ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಏಪ್ರಿಲ್ 30ರ ವರೆಗೆ ಮಾಸ್ಟರ್ ಮೈಂಡ್ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಎಂದೇ ಬಿಂಬಿತವಾಗಿದ್ದ ವಾಸೀಂ ಪಠಾಣ್ ಹಾಗೂ ಆತನ ಸಹಚರ ತೌಫಿಲ್ ಮುಲ್ಲಾ ಎಂಬಾತನನ್ನು ಇಂದು ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಏಪ್ರಿಲ್ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಹೌದು. ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ ಇಂದು ಪ್ರಕರಣದ ಕುರಿತು ಮಾಸ್ಟರ್ ಮೈಂಡ್ ಹಾಗೂ ಆತನ ಸಹಚರನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬೆನ್ನಲ್ಲೇ ನ್ಯಾಯಾಲಯ ಏಪ್ರಿಲ್ 30ರ ವರೆಗೆ ನ್ಯಾಯಾಂಗ ಬಂಧನ ಆದೇಶ ನೀಡಿದೆ.

ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಶಿರ್ ಹೊನ್ನಾಳ ಹಾಗೂ ಆರಿಫ್ ನಾಗರಾಳ ಎಂಬುವರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಆದೇಶಿಸಿದೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/04/2022 10:12 pm

Cinque Terre

176.44 K

Cinque Terre

2

ಸಂಬಂಧಿತ ಸುದ್ದಿ