ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿಯನ್ನು ಹಾಳು ಮಾಡಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದವರಲ್ಲಿ ಏಳು ಜನರಿಗೆ ಜಾಮೀನು ದೊರೆತಿದೆ.
ತಿಂಗಳ ಹಿಂದೆಯಷ್ಟೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾದ 156 ಆರೋಪಿಗಳಲ್ಲಿ ಏಳು ಮಂದಿಗೆ ಜಾಮೀನು ದೊರೆತಿದ್ದು, ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಿದ್ಯಾರ್ಥಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಜಾಮೀನಿಗೆ 148 ಮಂದಿಯಿಂದ ಅರ್ಜಿ ಸಲ್ಲಿಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪಿಯುಸಿ, ಪದವಿ ಶೈಕ್ಷಣಿಕ ಹಿನ್ನೆಲೆಯಲ್ಲಿ ಆರು ಮಂದಿಗೆ ಹಾಗೂ ವೈದ್ಯಕೀಯ ಶಿಕ್ಷಣದ ಹಿನ್ನೆಲೆಯಲ್ಲಿ ಒಬ್ಬರಿಗೆ ಜಾಮೀನು ನೀಡಿದೆ ಎಂದು ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಬಿ.ಆರ್. ಮಹ್ಮದನವರ್ ತಿಳಿಸಿದರು. ಜಾಮೀನು ಮೇಲೆ ಬಿಡುಗಡೆಯಾದವರು ಬಳ್ಳಾರಿ, ಮೈಸೂರು, ಕಲಬುರ್ಗಿ ಮತ್ತು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/05/2022 07:18 pm