ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆತ್ಮಹತ್ಯೆಗೆ ನೌಕರನ ಕುಟುಂಬ ನಿರ್ಧಾರ- ಸಚಿವರು ನೋಡಲೇಬೇಕಾದ ಸ್ಟೋರಿ

ಹುಬ್ಬಳ್ಳಿ: ಆ ಮಹಿಳೆಯ ಗಂಡ ಆಸ್ಪತ್ರೆಯೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿರುವ ಸೇವಕ. ಆತನ ಸೇವೆಯನ್ನು ನಂಬಿಕೊಂಡ ಕುಟುಂಬಕ್ಕೆ ಈಗ ಸಂಕಷ್ಟ ಎದುರಾಗಿದೆ. ವೇತನವೂ ಇಲ್ಲದೇ ಅಧಿಕಾರಗಳ ಕಿರುಕುಳಕ್ಕೆ ಬೇಸತ್ತಿರುವ ಕುಟುಂಬ ಈಗ ಆತ್ಮಹತ್ಯೆಗೆ ಮುಂದಾಗುತ್ತಿದೆ. ಹಾಗಿದ್ದರೇ ಅಧಿಕಾರಿಗಳ ಹಾಗೂ ಸಿಬ್ಬಂದಿ ವಿರುದ್ಧ ಇಷ್ಟೊಂದು ಗಂಭೀರ ಆರೋಪ ಮಾಡುತ್ತಿರುವ ಮಹಿಳೆ ಆದರೂ ಯಾರು.? ಅವರಿಗೆ ಆಗಿರುವ ಅನ್ಯಾಯವಾದರೂ ಏನು ಅಂತೀರಾ ಈ ಸ್ಟೋರಿ ನೋಡಿ.

ಹೀಗೆ ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಿರುವ ಈ ಮಹಿಳೆ ಶಾಂತಾ ಪ್ರಶಾಂತಕುಮಾರ್ ಹೊಸಳ್ಳಿ.‌ ಈ ಮಹಿಳೆಯ ಗಂಡ ಪ್ರಶಾಂತಕುಮಾರ್ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು ಐದಾರೂ ತಿಂಗಳಿಂದ ವೇತನ ಇಲ್ಲದೇ ಕರ್ತವ್ಯ ನಿರ್ವಹಣೆ ಮಾಡುವಂತಾಗಿದೆ. ಇಷ್ಟೇ ಆಗಿದ್ದರೆ ಈ ಕುಟುಂಬ ಹೇಗೋ ನೀರು ಕುಡಿದಾದರೂ ಜೀವನ ನಡೆಸುತ್ತಿತ್ತು. ಆದರೆ ಇಲ್ಲಿ ಆಗಿದ್ದು ಮಾತ್ರ ಬೇರೆಯೇ ಇಲ್ಲಿ ಸಿಬ್ಬಂದಿಯೊಬ್ಬರು ಪ್ರಶಾಂತಕುಮಾರ್‌ಗೆ ಕಿರುಕುಳ ನೀಡುತ್ತಿದ್ದು, ಬೇಕಾಬಿಟ್ಟಿಯಾಗಿ ವರ್ಗಾವಣೆ ಮಾಡುವ ಮೂಲಕ ದರ್ಪವನ್ನು ಮೆರೆಯುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿರುವ ಕುಟುಂಬ ಈಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಣ್ಣೀರು ಹಾಕುತ್ತಿದ್ದಾರೆ.

ಬೈಟ್: ಶಾಂತಾ ಪ್ರಶಾಂತಕುಮಾರ್ ಹೊಸಳ್ಳಿ

ಇನ್ನೂ 2006ರಂದು ಸೇವೆಗೆ ಸೇರಿರುವ ಪ್ರಶಾಂತಕುಮಾರ್ ರಾಜ್ಯದ ಹಲವಾರು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ಹುಬ್ಬಳ್ಳಿ ಕಾರವಾರ ರಸ್ತೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಅಧಿಕಾರಿಗಳ ಕಿರುಕುಳ ಹಾಗೂ ಅನಧಿಕೃತವಾಗಿ ವೇತನ ತಡೆಹಿಡಿಯುವ ಮೂಲಕ ಕುಟುಂಬದ ನಿರ್ವಹಣೆ ಜೊತೆಗೆ ಆಟ ಆಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ ನೌಕರನ ಹೆಂಡತಿ ಶಾಂತಾ ಈಗ ಸಾಮೂಹಿಕವಾಗಿ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಧರಣಿಗೂ ಯಾವುದೇ ರೀತಿಯಲ್ಲಿ ಸ್ಪಂದನೆ ಸಿಗದೇ ಇದ್ದಲ್ಲಿ ಆಸ್ಪತ್ರೆಯ ಮುಂದೆಯೇ ಸಾಮೂಹಿಕವಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಬೈಟ್:ಬೈಟ್: ಶಾಂತಾ ಪ್ರಶಾಂತಕುಮಾರ್ ಹೊಸಳ್ಳಿ

ಒಟ್ಟಿನಲ್ಲಿ ಅಧಿಕಾರಿಗಳ ದರ್ಪವೋ ಅಥವಾ ಇನ್ನಾವುದೇ ಕಾರಣವೋ ಗೊತ್ತಿಲ್ಲ. ಆದರೆ ನೌಕರನ ಕುಟುಂಬ ಮಾತ್ರ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ಈ ಬಗ್ಗೆ ಕಾರ್ಮಿಕ ಸಚಿವರು ಹಾಗೂ ಸರ್ಕಾರ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕಿದೆ.

Edited By : Somashekar
Kshetra Samachara

Kshetra Samachara

17/05/2022 07:22 pm

Cinque Terre

42.92 K

Cinque Terre

8

ಸಂಬಂಧಿತ ಸುದ್ದಿ