ಹುಬ್ಬಳ್ಳಿ: ಇಷ್ಟು ದಿನ ಶಾಂತವಾಗಿದ್ದ ಧಾರವಾಡ ಜಿಲ್ಲೆಯಲ್ಲಿ ಈಗ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ಮೋಜು ಮಸ್ತಿ ಹೆಸರಿನಲ್ಲಿ ಪಾರ್ಟಿ ಮಾಡಲು ಹೋಗಿ ಅವಾಂತರ ಸೃಷ್ಟಿಸಿದ್ದಾರೆ. ಆ ಪಾರ್ಟಿಯಲ್ಲಿ ಎಣ್ಣೆ ಗುಂಡಿನ ಹಾವಳಿಗಿಂತ ಬಂದೂಕಿನ ಗುಂಡಿನ ಸದ್ದು ಜೋರಾಗಿತ್ತು. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು ಅಂತೀರಾ ಈ ಸ್ಟೋರಿ ನೋಡಿ..
ಹೌದು.ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, 100 ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಫಾರ್ಮ್ ಹೌಸ್ ನಲ್ಲಿ ನಡೆದಿದೆ. ಆರ್.ಟಿ.ಐ. ಕಾರ್ಯಕರ್ತ ಪುತ್ರನ ಬರ್ತಡೇ ಪಾರ್ಟಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಕೇಶ್ವಾಪುರದ ಫಿಲೋಮಿನಾ ಪೌಲ್ ಪುತ್ರ ಸುಂದರ ಪೌಲ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುಂಡಿನ ಸದ್ದು ಮೊಳಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ರಾತ್ರಿ ಫಾರ್ಮ್ ಹೌಸ್ ನಲ್ಲಿ ಗುಂಡು-ತುಂಡಿನ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಗುಂಡಿನ ಸದ್ದು ಮೊಳಗಿದೆ ಎನ್ನಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ನೇತೃತ್ವದ ತಂಡ ಫಾರ್ಮ್ ಹೌಸ್ ತಲಾಷ್ ಮಾಡಿದೆ. ಈಗಾಗಲೇ ಬಿಯರ್ ಬಾಟಲ್ ಹಾಗೂ ಪಟಾಕಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಫ್.ಐ.ಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಒಟ್ಟಿನಲ್ಲಿ ಹುಬ್ಬಳ್ಳಿ ಶಹರದಲ್ಲಿ ಜೋರಾಗಿದ್ದ ಪುಂಡರ ಹಾವಳಿ ಈಗ ಹೊರವಲಯದ ಗ್ರಾಮಗಳಲ್ಲಿಯೂ ಉಪಟಳ ಹೆಚ್ಚಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಮೂಲಕ ಇಂತಹ ಕೃತ್ಯಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಬೇಕಿದೆ.
Kshetra Samachara
06/06/2022 03:12 pm