ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೊಲೀಸರಿಗೆ ಧಮ್ಕಿ ಹಾಕಿದ ಕಾರ್ಯಕರ್ತ: ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದು ಅವಾಜ್!

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಪೊಲೀಸರಿಗೆ ಧಮ್ಕಿ ಹಾಕಿದ ಘಟನೆ ನಡೆದಿದೆ.

ಹೌದು.. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಮಹಾಂತೇಶ ಹೊಳಿಗೆ ಹಿಂದೂ ಸಂಘಟನೆ ಕಾರ್ಯಕರ್ತ ಆವಾಜ್ ಹಾಕಿದ್ದಾನೆ. ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಕಾರ್ಯಕರ್ತನಿಂದ ಪೊಲೀಸರಿಗೆ ಅವಾಜ್ ಹಾಕಿದ್ದು,‌ ಕಳ್ಳತನ‌ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ಸ್ ಪೆಕ್ಟರ್ ಮಹಾಂತೇಶ ಹೊಳಿ ಅವರು, ಪರಿಶೀಲನೆ ಮಾಡಲು ಬಂದ ವೇಳೆಯಲ್ಲಿ ಪೊಲೀಸ್ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾನೆ.

ಏಕವಚನದಲ್ಲಿಯೇ ಪೊಲೀಸ್ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ್ದು, ನಿನಗೆ ಏನು ಮಾಡಿಕೊಳ್ಳೋಕೆ ಆಗಲ್ಲ. ನಿಮ್ಮಂತವರನ್ನು ಬಹಳ ಜನ ನೋಡಿದ್ದೇನೆ. ನಿಮ್ಮ ಕೈಯಲ್ಲಿ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಅವಾಜ್ ಹಾಕಿದ್ದು, ಪೊಲೀಸರ ಜೊತೆ ವಾಗ್ವಾದಕ್ಕಿಳಿದು ಧಮ್ಕಿ ಹಾಕಿದ್ದಾನೆ.

Edited By : Somashekar
Kshetra Samachara

Kshetra Samachara

13/06/2022 01:53 pm

Cinque Terre

42.84 K

Cinque Terre

14

ಸಂಬಂಧಿತ ಸುದ್ದಿ