ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಗಲಭೆ ಕೇಸ್ : FIR ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಧಾರವಾಡ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 12 ಎಫ್ ಐಆರ್ ಗಳಲ್ಲಿ 11 ಎಫ್ ಐಆರ್ ರದ್ದು ಗೊಳಿಸಬೇಕು ಎಂದು ಆರೋಪಿಗಳ ಪರ ಧಾರವಾಡ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಕಳೆದ ಏಪ್ರಿಲ್ 16 ರಂದು ಅಭಿಷೇಕ್ ಎಂಬ ಯುವಕ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು, ಗುಂಪೊಂದು ಹಳೇ ಹುಬ್ಬಳ್ಳಿ ಠಾಣೆ ಎದುರು ಪೊಲೀಸರ ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆ 156 ಜನರನ್ನು ಬಂಧಿಸಿದ್ದರು.

ಇನ್ನು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣದ ತನಿಖೆ ನಡೆಯುತಿದ್ದು, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಆಗಬೇಕಿದೆ, ಈ ಹಿನ್ನೆಲೆ ಎಫ್ ಐಆರ್ ರದ್ದು ಮಾಡಲು ಆಗಲ್ಲ ಎಂದು ಕೋರ್ಟ್ ಹೇಳಿದೆ.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

13/06/2022 08:50 pm

Cinque Terre

54.51 K

Cinque Terre

13

ಸಂಬಂಧಿತ ಸುದ್ದಿ