ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 30 ಮಂದಿ ಯುವಕರು ಪೊಲೀಸ್ ವಶಕ್ಕೆ; ಆಯುಕ್ತ ಲಾಬುರಾಮ್

ಧಾರವಾಡ: ಅಗ್ನಿಪಥ ಯೋಜನೆ ವಿರೋಧಿಸಿ ಧಾರವಾಡದಲ್ಲಿ ನಡೆದ ಲಾಠಿ ಚಾರ್ಜ್‌ಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಲಾಬುರಾಮ್ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ.

200ಕ್ಕೂ ಅಧಿಕ ಜನ ಯುವಕರು ಅಗ್ನಿಪಥ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಯುವಕರ ಮನವೊಲಿಸಲು ಮುಂದಾದರೂ ಕೇಳದ ಅವರು, ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಇದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ಸಂಬಂಧ ಧಾರವಾಡಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಲಾಬುರಾಮ್, ಡಿಸಿಪಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಮನವೊಲಿಕೆಗೆ ಯುವಕರು ಸ್ಪಂದನೆ ನೀಡಲಿಲ್ಲ. ದಾಂಧಲೆ ಮಾಡಲು ಆರಂಭಿಸಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದರು.

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ 30 ಮಂದಿ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Edited By :
Kshetra Samachara

Kshetra Samachara

18/06/2022 01:47 pm

Cinque Terre

28.64 K

Cinque Terre

1

ಸಂಬಂಧಿತ ಸುದ್ದಿ