ಹುಬ್ಬಳ್ಳಿ: ನಿನ್ನೆ ರಾತ್ರಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಕು ಇರಿತಕ್ಕೆ ಒಳಗಾಗಿದ್ದ ಚಂದ್ರಶೇಖರ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಲಾಭುರಾಮ್ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಹಾಗೂ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಮ್ಮ ತಂಗಿಯನ್ನು ಚುಡಾಯಿಸಿದ್ದಕ್ಕಾಗಿ ಅಣ್ಣ ತಮ್ಮಂದಿರು ಚಂದ್ರಶೇಖರನಿಗೆ ಚಾಕು ಇರಿದು ಹಲ್ಲೆ ಮಾಡಿದ್ದರು. ಚಾಕು ಇರಿತಕ್ಕೆ ಒಳಗಾಗಿದ್ದ ಚಂದ್ರಶೇಖರ್ ಗುದ್ದಿ ಚಿಕಿತ್ಸೆಗೆ ಸ್ಪಂದಿಸದೇ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾನೆ. ಈ ನಿಟ್ಟಿನಲ್ಲಿ ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಕರಣಗಳು ನಡೆಯುತ್ತಿದ್ದು, ಪೊಲೀಸ್ ಆಯುಕ್ತರೇ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಇನ್ನು ತಮ್ಮ ಸಹೋದರಿಗೆ ಫೋನ್ ಮಾಡಿ ಪೀಡಿಸುತ್ತಿದ್ದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಚಂದ್ರಶೇಖರ್ ಮೇಲೆ ಕಿರಣ ಭಜಂತ್ರಿ ಹಾಗೂ ಅಭಿಷೇಕ್ ಭಜಂತ್ರಿ ಎಂಬುವವರು ಹಲ್ಲೆ ಮಾಡಿದ್ದರು. ಸದ್ಯ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
24/06/2022 02:01 pm