ಧಾರವಾಡ: ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಅವರ ಹತ್ಯೆ ಖಂಡಿಸಿ ಧಾರವಾಡದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮುಸ್ಲಿಂರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರವಿದೆಯೋ ಅಲ್ಲಿ ಮುಸ್ಲಿಂ ಗೂಂಡಾಗಳನ್ನು ಬೆಳೆಸಲಾಗುತ್ತಿದೆ ಎಂದು ಆರೋಪಿಸಿದ ಮುತಾಲಿಕ್, ಕೂಡಲೇ ಕೇಂದ್ರ ಸರ್ಕಾರ ಕನ್ಹಯ್ಯ ಹತ್ಯೆ ಪ್ರಕರಣವನ್ನು ತನಿಖೆ ನಡೆಸಿ, ಹಂತಕರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ನಾನು ಕನ್ಹಯ್ಯ ಲಾಲ್ ಹಾಗೂ ನೂಪುರ ಶರ್ಮಾಗೆ ನಮ್ಮ ಬೆಂಬಲ ಎಂಬ ಪೋಸ್ಟರ್‌ಗಳನ್ನು ಹಿಡಿದ ಶ್ರೀರಾಮ ಸೇನೆ ಕಾರ್ಯಕರ್ತರು, ಮುಸ್ಲಿಂರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದಲ್ಲಿ ಕಲ್ಲಂಗಡಿ ಒಡೆದಾಗ ದೊಡ್ಡಮಟ್ಟದಲ್ಲಿ ಧ್ವನಿ ಎತ್ತಿದ ಬುದ್ಧಿಜೀವಿಗಳು, ಜೆಡಿಎಸ್‌ನವರು ಈಗ ತಲೆ ಒಡೆದಾಗ ಏಕೆ ಧ್ವನಿ ಎತ್ತುತ್ತಿಲ್ಲ. ನೀವು ಏಜೆಂಟ್‌ರಾಗಿ ಕೆಲಸ ಮಾಡಬೇಡಿ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮುತಾಲಿಕ್, ಹೆಚ್ಚುವರಿ ಜಿಲ್ಲಾಧಿಕಾರಿ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/06/2022 01:02 pm