ಹುಬ್ಬಳ್ಳಿ; ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಮುಗಿಸಿಕೊಂಡು ಇವತ್ತಷ್ಟೇ ರಿಲೀಸ್ ಆಗಿದ್ದ ವ್ಯಕ್ತಿಯೊಬ್ಬನನ್ನು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ವಶಕ್ಕೆ ಪಡೆದಿದ್ದಾರೆ.
ಹೌದು.. ನಗರದ ವಿಶ್ವೇಶ್ವರನಗರದ ಸಬ್ ಜೈಲ್ ನಿಂದ ಇಂದು ಶಿಕ್ಷೆ ಮುಗಿಸಿಕೊಂಡು ರಿಲೀಸ್ ಆಗುತ್ತಿದ್ದಂತೆಯೇ ಪೊಲೀಸರು ಕರೆದುಕೊಂಡು ಹೋಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪ್ರಕರಣವೊಂದರ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ತನ್ನ ಶಿಕ್ಷೆಯ ಅವಧಿ ಪೂರ್ಣಗೊಳಿಸಿಕೊಂಡು ಹೊರ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದು, ಆತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/07/2022 10:44 pm